Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:10 - ಕನ್ನಡ ಸಮಕಾಲಿಕ ಅನುವಾದ

10 “ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:10
39 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.


ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.


ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ.


ಓ ಸೇನಾಧೀಶ್ವರ ಯೆಹೋವ ದೇವರೇ, ನೀತಿವಂತರನ್ನು ಪರಿಶೋಧಿಸುವವರೇ, ಅಂತರಿಂದ್ರಿಯಗಳನ್ನೂ, ಹೃದಯವನ್ನೂ ನೋಡುವವರೇ, ನೀವು ಅವರಿಗೆ ಪ್ರತಿದಂಡನೆ ಮಾಡುವುದನ್ನು ನಾನು ನೋಡುವಂತೆ ಮಾಡಿ. ಏಕೆಂದರೆ, ನಿಮಗೆ ನನ್ನ ವ್ಯಾಜ್ಯವನ್ನು ತಿಳಿಯಮಾಡಿದ್ದೇನೆ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ನೀವು ವಾಸಮಾಡುವ ಪರಲೋಕದಿಂದ ಕೇಳಿ ಮನ್ನಿಸಿ, ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ”


ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.


ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.


ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.


ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು. ತನ್ನ ವೈರಿಗಳಿಗೆ ಉರಿಯನ್ನೂ, ತನ್ನ ಶತ್ರುಗಳಿಗೆ ಪ್ರತಿಫಲವನ್ನೂ, ದ್ವೀಪಗಳಿಗೆ ಪ್ರತಿಫಲವನ್ನೂ ಸಲ್ಲಿಸುವನು.


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು.


ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’


ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.


ಮಹೋನ್ನತರಾದ ದೇವರು ನನ್ನ ಗುರಾಣಿಯಾಗಿದ್ದಾರೆ, ಅವರು ಯಥಾರ್ಥ ಹೃದಯವುಳ್ಳವರನ್ನು ರಕ್ಷಿಸುತ್ತಾರೆ.


ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ. ವಧಿಸಲಿಕ್ಕಾಗಿರುವ ಕುರಿಗಳಂತೆ ಜನರು ನಮ್ಮನ್ನು ಎಣಿಸಿದ್ದಾರೆ.


ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದರಿಂದ ತೃಪ್ತನಾಗುವನು, ಮನುಷ್ಯನ ಕೈಕೆಲಸಗಳು ಅವನಿಗೆ ಪ್ರತಿಫಲವನ್ನು ಕೊಡುವುವು.


ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು