ಯೆರೆಮೀಯ 17:11 - ಕನ್ನಡ ಸಮಕಾಲಿಕ ಅನುವಾದ11 ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು; ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.” ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.