ಯೆರೆಮೀಯ 17:18 - ಕನ್ನಡ ಸಮಕಾಲಿಕ ಅನುವಾದ18 ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ; ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನು ಬೇಡ; ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತಭಂಗದಿಂದ ಅವರನ್ನು ನಾಶಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು. ಅಧ್ಯಾಯವನ್ನು ನೋಡಿ |