ಯೆರೆಮೀಯ 17:24 - ಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಸರ್ವೇಶ್ವರನಾದ ನಾನು ಹೇಳುವ ಮಾತಿದು : ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನು ತರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ಪವಿತ್ರವಾಗಿ ಆಚರಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನಾದ ನನ್ನ ನುಡಿ ಇದೇ - ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ ಯಾವ ಕೆಲಸವನ್ನೂ ಮಾಡದೆ ಆ ದಿನವನ್ನು ನನ್ನ ದಿನವೆಂದು ಆಚರಿಸಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’” ಇದು ಯೆಹೋವನ ನುಡಿ. “‘ನೀವು ಸಬ್ಬತ್‌ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿ |