ಯೆರೆಮೀಯ 17:25 - ಕನ್ನಡ ಸಮಕಾಲಿಕ ಅನುವಾದ25 ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಹಾಗು ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ನಗರದ ಬಾಗಿಲುಗಳನ್ನು ಪ್ರವೇಶಿಸುವರು. ಇವರು ಮಾತ್ರವಲ್ಲ, ಇವರ ಪ್ರಧಾನರು, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು ಎಲ್ಲರೂ ಇಲ್ಲಿ ಸೇರುವರು. ಈ ನಗರದಲ್ಲಿ ಜನರು ಯಾವಾಗಲು ತುಂಬಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಪ್ರಭುಗಳೂ ರಥಾಶ್ವಗಳನ್ನೇರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು; ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇವಿುನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು; ಈ ಪಟ್ಟಣವು ನಿತ್ಯವೂ ನೆಲೆಯಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “‘ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು. ಅಧ್ಯಾಯವನ್ನು ನೋಡಿ |