ಯೆರೆಮೀಯ 17:6 - ಕನ್ನಡ ಸಮಕಾಲಿಕ ಅನುವಾದ6 ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭಸಂಭವಿಸಿದರೂ ಅದನ್ನು ಕಾಣನು; ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಬರಡು ಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”