Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:8 - ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ ದಗೆಗೆ ಭಯಪಡದೆ ಹಸುರೆಲೆಯನ್ನು ಬಿಡುತ್ತಾ ಕ್ಷಾಮ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:8
12 ತಿಳಿವುಗಳ ಹೋಲಿಕೆ  

ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.


ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ


ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”


ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ; ಆ ಬಳ್ಳಿಯು ತೋಟದಲ್ಲೆಲ್ಲಾ ಹಬ್ಬುತ್ತಿದೆ.


ನನ್ನ ಬೇರು ನೀರಿನ ಬಳಿ ಹಬ್ಬಿರುತ್ತದೆ; ರಾತ್ರಿಯಿಡಿ ನನ್ನ ಕೊಂಬೆಯ ಮೇಲೆ ಮಂಜು ಬಿದ್ದಿರುತ್ತದೆ.


ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂಬುದು.


ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಬಹಳ ಎತ್ತರವಾಗಿದೆ, ಅದರ ತುದಿಯು ದಟ್ಟವಾದ ಕೊಂಬೆಗಳ ನಡುವೆಯಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು