Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:18 - ಕನ್ನಡ ಸಮಕಾಲಿಕ ಅನುವಾದ

18 ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:18
37 ತಿಳಿವುಗಳ ಹೋಲಿಕೆ  

ಮೋಸ ಮಾಡುವವನೇ, ಹದವಾದ ಕ್ಷೌರ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡನ್ನು ಕಲ್ಪಿಸುತ್ತದೆ.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”


“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.


ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ.


ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಗರ್ವಿಷ್ಠ ಮನುಷ್ಯರೆಲ್ಲರೂ ಮಾತನಾಡಿ ಯೆರೆಮೀಯನಿಗೆ, “ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾಗಿರುವುದಕ್ಕೆ ಈಜಿಪ್ಟಿಗೆ ಹೋಗಬಾರದೆಂದು ಹೇಳುವುದಕ್ಕೆ ನಮ್ಮ ದೇವರಾದ ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ.


ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.


ಅವರು ತಮ್ಮ ನಾಲಿಗೆಯನ್ನು ಖಡ್ಗದಂತೆ ಮಸೆಯುತ್ತಾರೆ.


ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ.


ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.


ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ನೀವು ಇಸ್ರಾಯೇಲರಿಗೆ ಯೆಹೋವ ದೇವರು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ, ಎಲ್ಲಾ ಕಟ್ಟಳೆಗಳನ್ನು ಬೋಧಿಸುವುದಕ್ಕಾಗಿಯೂ ಇರುವುದು,” ಎಂದರು.


ಯೇಸುವಿನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತುಗಳನ್ನು ಕೇಳಿ, “ನಾವು ಸಹ ಕುರುಡರೋ?” ಎಂದು ಯೇಸುವನ್ನು ಪ್ರಶ್ನಿಸಿದರು.


ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.


ನಿಯಮ ಬೋಧಕ ಒಬ್ಬನು ಯೇಸುವಿಗೆ, “ಬೋಧಕರೇ, ನೀವು ಇವುಗಳನ್ನು ಹೇಳುವುದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀರಿ,” ಎಂದನು.


ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.


“ ‘ “ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.


ಓ ಯೆಹೋವ ದೇವರೇ, ನನಗೆ ಕಿವಿಗೊಡು. ನನ್ನ ಸಂಗಡ ವ್ಯಾಜ್ಯವಾಡುವವರ ಮಾತನ್ನು ಕೇಳು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು.


ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.


ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.


ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.


“ಯೆಹೋವ ದೇವರ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.


ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿರಿ.


ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.


ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು