Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:6 - ಕನ್ನಡ ಸಮಕಾಲಿಕ ಅನುವಾದ

6 “ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ ನೀವು ನನ್ನ ಕೈಯಲ್ಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಇಸ್ರೇಲ್ ಮನೆತನದವರೇ, ನಾನು ನಿಮಗೆ ಹೀಗೆಯೇ ಮಾಡಲು ಸಾಧ್ಯವೆಂಬುದನ್ನು ನೀವು ಬಲ್ಲಿರಿ. ನೀವು ಕುಂಬಾರನ ಕೈಯಲ್ಲಿದ್ದ ಜೇಡಿಮಣ್ಣಿನಂತಿದ್ದೀರಿ. ನಾನು ಆ ಕುಂಬಾರನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:6
8 ತಿಳಿವುಗಳ ಹೋಲಿಕೆ  

ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.


“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?


ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟು ಹೋಯಿತು. ಆಗ ಕುಂಬಾರನಿಗೆ ಒಳ್ಳೆಯದೆಂದು ತೋರುವ ಪ್ರಕಾರ, ಅದನ್ನು ಮತ್ತೊಂದು ಪಾತ್ರೆಯನ್ನಾಗಿ ಮಾಡಿದನು.


ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.


“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’


“ಕರ್ತದೇವರ ಮನಸ್ಸನ್ನು ಅರಿತವರು ಯಾರು? ಅವರಿಗೆ ಆಲೋಚನೆಯನ್ನು ನೀಡುವವರು ಯಾರು?”


ಅನಂತರ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು