Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:8 - ಕನ್ನಡ ಸಮಕಾಲಿಕ ಅನುವಾದ

8 ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ದಂಡನೆ ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:8
32 ತಿಳಿವುಗಳ ಹೋಲಿಕೆ  

“ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು.


ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.


ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.


ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು, ತಮ್ಮ ಸೇವಕರ ಮೇಲೆ ಅನುಕಂಪವನ್ನೂ ತೋರಿಸುವರು.


ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.


ಆದ್ದರಿಂದ ಇಸ್ರಾಯೇಲಿನ ಪ್ರಧಾನರೂ, ಅರಸನೂ ತಮ್ಮನ್ನು ತಗ್ಗಿಸಿಕೊಂಡು, “ಯೆಹೋವ ದೇವರು ನೀತಿವಂತರು,” ಎಂದರು.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ.


ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.


ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.


ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ’ ಎಂದು ಹೇಳುವಾಗ ಅವನು ಪಾಪದಿಂದ ಬಿಟ್ಟು ತಿರುಗಿಕೊಂಡು ಮತ್ತು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ


ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.


“ಆದ್ದರಿಂದ, ನರಪುತ್ರನೇ, ನೀನು ನಿನ್ನ ಜನರ ಮಕ್ಕಳಿಗೆ ಹೇಳು: ‘ಒಬ್ಬ ನೀತಿವಂತನು ಅವಿಧೇಯನಾದರೆ, ಆ ವ್ಯಕ್ತಿಯ ಹಿಂದಿನ ನೀತಿಯು ಯಾವುದಕ್ಕೂ ಲೆಕ್ಕವಿಲ್ಲ. ಹಾಗೆಯೇ ದುಷ್ಟನು ಪಶ್ಚಾತ್ತಾಪಪಟ್ಟರೆ, ಆ ವ್ಯಕ್ತಿಯ ಹಿಂದಿನ ದುಷ್ಟತನವು ಖಂಡನೆಯನ್ನು ತರುವುದಿಲ್ಲ. ಪಾಪಮಾಡುವ ನೀತಿವಂತನು ಹಿಂದೆ ನೀತಿವಂತರಾಗಿದ್ದರೂ ಬದುಕಲು ಬಿಡುವುದಿಲ್ಲ.’


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು