ಯೆರೆಮೀಯ 19:11 - ಕನ್ನಡ ಸಮಕಾಲಿಕ ಅನುವಾದ11 ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವಶಕ್ತ ಸರ್ವೇಶ್ವರನ ಸಂದೇಶವಿದು - ಕುಂಬಾರ ಮಾಡಿದ ಮಣ್ಣಿನ ಮಡಕೆಯನ್ನು ಒಡೆದುಹಾಕಿದ ಮೇಲೆ ಸರಿಪಡಿಸಲಾಗದು. ಅಂತೆಯೇ ನಾನು ಈ ಜನರನ್ನು ಹಾಗು ನಗರವನ್ನು ಒಡೆದುಹಾಕುವೆನು. ಹೂಣಲು ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಹೆಣಗಳನ್ನು ಈ ತೋಫೆತಿನಲ್ಲೇ ಹೂಣುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನೂ ಪಟ್ಟಣವನ್ನೂ ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು. ಅಧ್ಯಾಯವನ್ನು ನೋಡಿ |