Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:3 - ಕನ್ನಡ ಸಮಕಾಲಿಕ ಅನುವಾದ

3 ‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೂದದ ಅರಸರೇ, ಯೆರೂಸಲೇವಿುನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:3
18 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಸಮುಯೇಲನಿಗೆ, “ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯವನ್ನು ಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳೂ ಕಂಪಿಸುವುವು.


ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.


ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.


ಜನಾಂಗಗಳು ಯೆಹೋವ ದೇವರ ಹೆಸರಿಗೂ, ಭೂರಾಜರೆಲ್ಲರೂ ನಿಮ್ಮ ಮಹಿಮೆಗೂ ಭಯಪಡುವರು.


ಆದ್ದರಿಂದ, ರಾಜರುಗಳೇ, ಈಗ ಜ್ಞಾನವಂತರಾಗಿರಿ. ಭೂಲೋಕದ ಅಧಿಕಾರಿಗಳೇ, ಎಚ್ಚರಿಕೆಯಿಂದಿರಿ.


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”


“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”


“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.


ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಕೇಡು! ಎಂದೂ ಕೇಳದ ಕೇಡು, ಇಗೋ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು