Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:5 - ಕನ್ನಡ ಸಮಕಾಲಿಕ ಅನುವಾದ

5 ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತಮ್ಮ ಮಕ್ಕಳನ್ನು ಬಾಳ್‍ದೇವತೆಗೆ ಆಹುತಿಕೊಡಲು ಆ ದೇವತೆಗೆ ಬಲಿಪೀಠಗಳನ್ನು ಕೂಡ ಏರ್ಪಡಿಸಿದ್ದಾರೆ. ನಾನು ಇಂಥ ಆಚಾರಗಳನ್ನು ವಿಧಿಸಲಿಲ್ಲ. ಅದರ ಮಾತನ್ನೇ ಎತ್ತಲಿಲ್ಲ. ಅಂಥದ್ದು ನನ್ನ ಮನಸ್ಸಿಗೂ ತೋಚಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿಕೊಡುವದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ; ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ. ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:5
14 ತಿಳಿವುಗಳ ಹೋಲಿಕೆ  

ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.


ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.


“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.


ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.


“ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.


ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿದುಕೊಳ್ಳುವರು.’


ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.


ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಮೋಹವನ್ನು ಸುರಿಸಿದ ಕಾರಣದಿಂದಲೂ, ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ, ನಿನ್ನ ಅಸಹ್ಯ ವಿಗ್ರಹಗಳಿಂದಲೂ, ನೀನು ಆಹುತಿ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ,


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು