Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:6 - ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದಕಾರಣ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋಮಿನ ಕಣಿವೆ ಎಂಬ ಹೆಸರುಗಳು ಹೋಗಿ, ‘ಕೊಲೆಯ ಕಣಿವೆ’ ಎಂದು ಹೆಸರಿಸಲಾಗುವ ಕಾಲ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋವಿುನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈಗ, ಬೆನ್‌ಹಿನ್ನೊಮೀನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು “ತೋಫೆತ್” ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು “ಕೊಲೆಯ ಕಣಿವೆ” ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:6
5 ತಿಳಿವುಗಳ ಹೋಲಿಕೆ  

ಅಲ್ಲಿಂದ ಯೆಬೂಸಿಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗನ್ನು ದಾಟಿ, ಉತ್ತರಕ್ಕಿರುವ ರೆಫಾಯಿಮ್ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕೆ ಬೆನ್ ಹಿನ್ನೋಮನ ತಗ್ಗಿನ ಮುಂದಿರುವ ಬೆಟ್ಟದ ಶಿಖರದವರೆಗೂ ಹೋಗುತ್ತದೆ.


ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು