ಯೆರೆಮೀಯ 19:8 - ಕನ್ನಡ ಸಮಕಾಲಿಕ ಅನುವಾದ8 ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಬಂಧಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು. ಅಧ್ಯಾಯವನ್ನು ನೋಡಿ |