Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:15 - ಕನ್ನಡ ಸಮಕಾಲಿಕ ಅನುವಾದ

15 ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳು ಮಾಡಿವೆ, ಅವನ ಊರುಗಳು ಸುಟ್ಟು ನಿರ್ನಿವಾಸಿಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:15
35 ತಿಳಿವುಗಳ ಹೋಲಿಕೆ  

ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಅವರ ಗರ್ಜನೆಯು ಸಿಂಹ ಆರ್ಭಟಿಸಿದಂತಿದೆ. ಪ್ರಾಯದ ಸಿಂಹ ಆರ್ಭಟಿಸಿದಂತಿದೆ. ಹೌದು, ಗರ್ಜಿಸುತ್ತಾ ಬೇಟೆಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ, ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.


“ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ. ಅವುಗಳ ಗೋಪುರಗಳು ಹಾಳಾಗಿವೆ. ಅವುಗಳ ಬೀದಿಗಳನ್ನು ಯಾರೂ ಹಾದುಹೋಗದ ಹಾಗೆ ಹಾಳುಮಾಡಿದ್ದೆನೆ. ಅವುಗಳ ಪಟ್ಟಣಗಳು ನಾಶವಾದವು. ಹೀಗೆ ಅಲ್ಲಿ ಯಾವನೂ ಇರುವುದಿಲ್ಲ; ಯಾವ ಮನುಷ್ಯನೂ ಅಲ್ಲಿ ವಾಸಿಸುವುದೂ ಇಲ್ಲ.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವ ದೇವರ ವಾಕ್ಯವು ನಿನಗೆ ವಿರುದ್ಧವಾಗಿದೆ, “ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು,” ಎಂದು ಅವರು ಹೇಳುತ್ತಾರೆ.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಸಿಂಹದ ಗವಿಯೂ, ಎಳೆಯ ಸಿಂಹಗಳು ಮೇಯುವ ಸ್ಥಳವೂ ಎಲ್ಲಿ? ಸಿಂಹವೂ, ಸಿಂಹಿಣಿಯೂ, ಸಿಂಹದ ಮರಿಗಳೂ ಭಯವಿಲ್ಲದೆ ನಡೆದಾಡುವ ಸ್ಥಳಗಳೆಲ್ಲಿ?


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹೇಗೆ ಕುರುಬನು ಸಿಂಹದ ಬಾಯಿಯಿಂದ ಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋ ಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರು ಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆ ಸಂರಕ್ಷಣೆ ಹೊಂದುತ್ತಾರೆ.”


ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?


ಬೇಟೆ ಇಲ್ಲದಿದ್ದರೆ, ಅಡವಿಯಲ್ಲಿ ಸಿಂಹವು ಗರ್ಜಿಸುವುದೋ? ಏನಾದರೂ ಹಿಡಿಯದಿದ್ದರೆ, ಗುಹೆಯಲ್ಲಿರುವ ಎಳೆಯ ಸಿಂಹವು ಅರಚುವುದೋ?


ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


“ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳು ಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”


“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ


ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.


“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.


ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.


ಇಗೋ, ಯೆಹೋವ ದೇವರು ಭೂಮಿಯನ್ನು ಬರಿದುಮಾಡಿ, ನಿರ್ಜನ ಪ್ರದೇಶವನ್ನಾಗಿ ಮಾಡಿ, ತಲೆಕೆಳಗಾಗಿ ತಿರುಗಿಸಿ, ಅದರ ನಿವಾಸಿಗಳನ್ನು ಚದರಿಸಿಬಿಡುವವರಾಗಿದ್ದಾರೆ.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.


ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ.


ಸಿಂಹಗಳು ಗರ್ಜಿಸಬಹುದು ಮತ್ತು ಕೂಗಬಹುದು, ಆದರೂ ಪ್ರಾಯದ ಸಿಂಹಗಳ ಹಲ್ಲುಗಳು ಮುರಿದುಹೋಗಿವೆ.


ಆಗ ಸಂಸೋನನೂ, ಅವನ ತಂದೆತಾಯಿಗಳೂ ತಿಮ್ನಾತಿಗೆ ಹೋಗುತ್ತಿದ್ದರು. ಅವರು ತಿಮ್ನತಿನ ದ್ರಾಕ್ಷಿತೋಟಗಳ ಬಳಿಗೆ ಬಂದಾಗ, ಪ್ರಾಯದ ಸಿಂಹವು ಗರ್ಜಿಸುತ್ತಾ ಅವನ ಎದುರಿಗೆ ಬಂದಿತು.


ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು. ಸಿಂಹಗಳ ಮರಿಗಳ ಹಾಗೆ ಶಬ್ದಮಾಡುವರು.


ಆದ್ದರಿಂದ ನೀನು ಪ್ರವಾದಿಸಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರು ನಿನ್ನನ್ನು ಹಾಳು ಮಾಡಿ ಎಲ್ಲಾ ಕಡೆಗಳಿಂದಲೂ ನಿನ್ನನ್ನು ತುಳಿದುಬಿಟ್ಟರು. ನೀವು ಇತರ ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಗಾರರ ಬಾಯಿಗೆ ಬಿದ್ದು ಜನರ ನಿಂದೆಗೆ ಗುರಿಯಾಗಿದ್ದೀರಿ.


ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ.


ಓ ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ, ನಾನು ನಿಮ್ಮನ್ನು ಹಾಳಾಗಿಯೂ, ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತೆಗೆದುಕೋ.”


ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.


ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು