Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:20 - ಕನ್ನಡ ಸಮಕಾಲಿಕ ಅನುವಾದ

20 “ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:20
50 ತಿಳಿವುಗಳ ಹೋಲಿಕೆ  

ನೀವು ಸ್ವಾಧೀನ ಮಾಡಿಕೊಳ್ಳುವ ದೇಶದ ಜನಾಂಗಗಳು ತಮ್ಮ ದೇವರುಗಳಿಗೆ ಪೂಜಿಸಿದ ಸ್ಥಳಗಳನ್ನೂ, ಬೆಟ್ಟಗಳ ಮೇಲಿನ ಎತ್ತರ ಸ್ಥಳಗಳನ್ನೂ, ಗುಡ್ಡಗಳ ಹಾಗು ಮರಗಳ ಕೆಳಗಿರುವ ಸ್ಥಳಗಳನ್ನು ನೀವು ಪೂರ್ಣವಾಗಿ ನಾಶಮಾಡಬೇಕು.


ಈಜಿಪ್ಟ್ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ನಿಮ್ಮ ನೊಗದ ಕಟ್ಟುಗಳನ್ನು ಮುರಿದು, ನಿಮ್ಮನ್ನು ತಲೆಯೆತ್ತಿ ನಡೆಯುವಂತೆ ಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಾನೇ.


ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.


ನಾನು ಅವಳಿಗೆ, “ನನ್ನೊಂದಿಗೆ ಬಹಳ ದಿವಸಗಳು ನನಗಾಗಿ ಇರಬೇಕು. ನೀನು ವ್ಯಭಿಚಾರವನ್ನು ಮಾಡಬಾರದು. ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಿನ್ನೊಂದಿಗೆ ಇರುವೆನು,” ಎಂದು ಹೇಳಿದೆನು.


“ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, ಬಂಧನಗಳನ್ನು ಕಿತ್ತು ಹಾಕುವೆನು; ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.


ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.


ನಾನು ಈಗ ನಿನ್ನ ಮೇಲಿನ ಅವರ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಡುವೆನು.


ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.


“ಒಹೊಲಳು ಇನ್ನು ನನ್ನ ವಶವಾಗಿರುವಾಗಲೇ ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು ತನ್ನ ನೆರೆಯವರಾದ ಅಸ್ಸೀರಿಯದವರನ್ನು,


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು.


ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ.


ಇದಲ್ಲದೆ ಅಸ್ಸೀರಿಯರೊಂದಿಗೂ ವ್ಯಭಿಚಾರ ಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀಯೆ; ಆದರೂ ತೃಪ್ತಿಯಾಗಲಿಲ್ಲ.


ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”


ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವುದು ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.


ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.


ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು.


ಈ ಮಾತುಗಳನ್ನು ಯೆಹೋಶುವನು ದೇವರ ನಿಯಮದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ಎತ್ತಿ, ಅದನ್ನು ಯೆಹೋವ ದೇವರ ಪರಿಶುದ್ಧಸ್ಥಳದ ಬಳಿಯಲ್ಲಿ ಇದ್ದ ಏಲಾ ಮರದ ಕೆಳಗೆ ನೆಟ್ಟನು.


ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಸೇವೆಸಲ್ಲಿಸಿ, ಅವರ ಮಾತಿಗೆ ವಿಧೇಯರಾಗುವೆವು,” ಎಂದರು.


ಆಗ ಅವರು ಯೆಹೋಶುವನಿಗೆ ಉತ್ತರವಾಗಿ, “ನೀನು ನಮಗೆ ಆಜ್ಞಾಪಿಸುವುದನ್ನೆಲ್ಲಾ ಮಾಡುವೆವು. ಎಲ್ಲಿಗೆ ಕಳುಹಿಸುತ್ತೀಯೋ, ಅಲ್ಲಿಗೆ ಹೋಗುವೆವು.


ನೀವು ಈ ಹೊತ್ತು, ಯೆಹೋವ ದೇವರೇ ನಮಗೆ ದೇವರು ಎಂದೂ, ಅವರ ಮಾರ್ಗಗಳಲ್ಲಿ ನಡೆದು, ಅವರು ಹೇಳಿದ ಆಜ್ಞಾವಿಧಿನಿಯಮಗಳನ್ನು ಪಾಲಿಸಿ, ಅವರ ಮಾತಿಗೆ ವಿಧೇಯರಾಗಿರುತ್ತೇವೆ ಎಂದೂ ದೃಢವಾಗಿ ಹೇಳಿದ್ದೀರಿ.


ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.


ನೀನೇ ಸಮೀಪಕ್ಕೆ ಹೋಗಿ ನಮ್ಮ ದೇವರಾದ ಯೆಹೋವ ದೇವರು ಹೇಳುವುದನ್ನೆಲ್ಲಾ ಕೇಳಿ, ನಮ್ಮ ದೇವರಾದ ಯೆಹೋವ ದೇವರು ನಿನಗೆ ಹೇಳಿದ್ದನ್ನೆಲ್ಲಾ ನಮಗೆ ಹೇಳು. ಆಗ ನಾವು ಕೇಳಿ ಅದರಂತೆ ಮಾಡುತ್ತೇವೆ,” ಎಂದು ಹೇಳಿದಿರಿ.


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು.


ಮೋಶೆಯು ಬಂದು ಯೆಹೋವ ದೇವರ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲಾ ಒಂದೇ ಸ್ವರದಿಂದ, “ಯೆಹೋವ ದೇವರು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ,” ಎಂದು ಉತ್ತರಕೊಟ್ಟರು.


ಜನರೆಲ್ಲಾ ಒಂದಾಗಿ ಉತ್ತರಕೊಟ್ಟು, “ಯೆಹೋವ ದೇವರು ಹೇಳಿದ್ದನ್ನೆಲ್ಲಾ ಮಾಡುತ್ತೇವೆ,” ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ಹೇಳಿದನು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.


ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟರು.


“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ನಾಯಕರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡುವೆನು. ಏಕೆಂದರೆ, ಅವರು ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿದಿದ್ದಾರೆ,” ಆದರೆ ಇವರು ಕೂಡ ಒಮ್ಮತವಾಗಿ ನೊಗವನ್ನು ಮುರಿದು, ಬಂಧನಗಳನ್ನು ಹರಿದುಬಿಟ್ಟಿದ್ದಾರೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು.


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟತನ ಮಾಡಿ, ಬಾಳನನ್ನು ಸೇವಿಸಿ,


ಅವರು ಯೆಹೋವ ದೇವರನ್ನು ಬಿಟ್ಟು, ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.


ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.


“ಅವರು ಹಾಕಿದ ಬೇಡಿಗಳನ್ನು ಮುರಿದು ಬಂಧಗಳನ್ನು ಹರಿದು ಬೀಸಾಡೋಣ,” ಎನ್ನುತ್ತಾರೆ.


ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.


ಇಸ್ರಾಯೇಲೇ, ಬೇರೆ ಜನಾಂಗಗಳು ಉಲ್ಲಾಸಿಸುವ ಪ್ರಕಾರ ಸಂತೋಷ ಪಡಬೇಡ. ಏಕೆಂದರೆ ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ಮಾಡಿದ್ದೀಯೆ. ಎಲ್ಲಾ ಧಾನ್ಯದ ಕಣಗಳಲ್ಲಿ ವ್ಯಭಿಚಾರದ ಕೂಲಿಯನ್ನು ಪ್ರೀತಿ ಮಾಡಿದ್ದೀಯೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು