Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:21 - ಕನ್ನಡ ಸಮಕಾಲಿಕ ಅನುವಾದ

21 ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:21
27 ತಿಳಿವುಗಳ ಹೋಲಿಕೆ  

ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿ ಫಲವನ್ನು ಫಲಿಸುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿದ್ದು ಏಕೆ?


ಅವರನ್ನು ಒಳಗೆ ಬರಮಾಡಿ, ಯೆಹೋವ ದೇವರೇ, ನಿಮ್ಮ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ ಯೆಹೋವ ದೇವರೇ, ನೀವು ವಾಸಿಸುವುದಕ್ಕೆ ಮಾಡಿಕೊಂಡಿರುವ ನಿಮ್ಮ ಸ್ವತ್ತಾಗಿರುವ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿರಿ.


“ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು.


ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.


ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.


ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.


ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.


ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ.


“ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


“ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆಯ್ದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.


ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,


ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.


ಬಂಗಾರವು ಹೇಗೆ ಮಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧಸ್ಥಳದ ಕಲ್ಲುಗಳೂ ಬೀದಿಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ಆ ದಿನದಲ್ಲಿ, ಫಲಭರಿತ ದ್ರಾಕ್ಷಿತೋಟದ ವಿಷಯವಾಗಿ ಹಾಡಿರಿ.


ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.


ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. ಆಗ ಅದು ಬೇರೂರಿ ದೇಶವನ್ನು ತುಂಬಿತು.


ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.


ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.


“ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು