Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:23 - ಕನ್ನಡ ಸಮಕಾಲಿಕ ಅನುವಾದ

23 “ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ‘ನಾನು ಅಶುದ್ಧಳಾಗಲಿಲ್ಲ, ಬಾಳ್‍ದೇವತೆಗಳನ್ನು ಹಿಂಬಾಲಿಸಲೇ ಇಲ್ಲ’ ಎಂದು ಹೇಗೆ ತಾನೆ ಹೇಳಬಲ್ಲೆ? ಆ ಕಣಿವೆಯಲ್ಲಿ ನಿನ್ನ ಹೆಜ್ಜೆಗುರುತುಗಳನ್ನು ನೋಡು ಅಲ್ಲಿ ನೀನು ಎಸಗಿದ ದುಷ್ಕೃತ್ಯಗಳನ್ನು ಮನಸ್ಸಿಗೆ ತಂದುಕೊ. ಅತ್ತ ಇತ್ತ ನೆಗೆದಾಡುವ, ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನಗೆ ಮುಡಚಟ್ಟಾಗಲಿಲ್ಲ, ಅನ್ಯದೇವತೆಗಳನ್ನು ನಾನು ಹಿಂಬಾಲಿಸಲಿಲ್ಲವೆಂದು ಹೇಗೆ ಹೇಳುತ್ತೀ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ಕೆಲಸವನ್ನು ಮನಸ್ಸಿಗೆ ತಂದುಕೋ, ತನ್ನ ಜಾಡೆಗಳನ್ನು ತಾರುಮಾರು ಮಾಡುವ ವೇಗವಾದ ಹೆಣ್ಣು ಒಂಟೆಯಂತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:23
24 ತಿಳಿವುಗಳ ಹೋಲಿಕೆ  

ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.


ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ; ಆದರೆ ಅವರು ತಮ್ಮ ಕೊಳೆಯನ್ನು ತೊಳೆದುಕೊಂಡಿರುವುದಿಲ್ಲ.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ಆದರೆ ಅವನು ತಾನೇ ನೀತಿವಂತನೆಂದು ತೋರಿಸುವುದಕ್ಕೆ, ಅಪೇಕ್ಷೆಯುಳ್ಳವನಾಗಿ ಯೇಸುವಿಗೆ, “ನನ್ನ ನೆರೆಯವನು ಯಾರು?” ಎಂದು ಕೇಳಿದನು.


ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”


ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”


“ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಮರುಭೂಮಿಯಲ್ಲಿ ಅರಬೀಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. ಹೀಗೆ ನಿನ್ನ ವೇಶ್ಯೆತನಗಳಿಂದಲೂ, ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.


“ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ.


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.


ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ.


ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾಗಿದ್ದವು.


ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.


ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”


“ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು:


ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು