Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:25
27 ತಿಳಿವುಗಳ ಹೋಲಿಕೆ  

ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು.


ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.”


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?


ಹಸುಳೆಗಳ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ. ಎಳೆಯ ಕೂಸುಗಳು ಅನ್ನ ಕೇಳುತ್ತವೆ. ಆದರೆ ಅವರಿಗೆ ಯಾರೂ ಅದನ್ನು ಕೊಡುವುದಿಲ್ಲ.


ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”


ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ನೆರಿಗೆಯು ಕೀಳಲಾಗುವುದು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ, ‘ಏನೂ ಪ್ರಯೋಜನವಿಲ್ಲ,’ ಎಂದುಕೊಳ್ಳಲಿಲ್ಲ. ನೀನು ಹೊಸ ಬಲವನ್ನು ತಂದುಕೊಂಡು, ಬೇಸರಗೊಳ್ಳದೆ ಮುಂದುವರೆದಿರುವೆ.


ಯಾಕೋಬಿನ ಮನೆತನದವರು ಪೂರ್ವದೇಶಗಳ ಮಂತ್ರತಂತ್ರಗಳಲ್ಲಿ ಮಗ್ನರಾಗಿ, ಫಿಲಿಷ್ಟಿಯರಂತೆ ಕಣಿ ಹೇಳುವವರಾಗಿಯೂ, ಬೇರೆ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆಯುಳ್ಳವರಾಗಿಯೂ ಇರುವುದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀರಿ.


ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.


ಆದುದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬಡತನದಲ್ಲಿ ಬಟ್ಟೆಬರೆ ಏನೂ ಇಲ್ಲದೆ, ಯೆಹೋವ ದೇವರು ನಿಮ್ಮ ಮೇಲೆ ಕಳುಹಿಸುವ ಆ ಶತ್ರುಗಳಿಗೇ ನೀವು ಸೇವಕರಾಗಬೇಕಾಗುವುದು. ಯೆಹೋವ ದೇವರು ನಿಮ್ಮನ್ನು ನಾಶಮಾಡುವವರೆಗೆ ಕಬ್ಬಿಣದ ನೊಗವನ್ನು ನಿಮ್ಮ ಮೇಲೆ ಹೊರಿಸುವರು.


ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.


“ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.


ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.


“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?


ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ?


“ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ.


ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.


“ ‘ “ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.”


ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.


“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,


ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.


ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು