ಯೆರೆಮೀಯ 2:27 - ಕನ್ನಡ ಸಮಕಾಲಿಕ ಅನುವಾದ27 ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನನ್ನ ಕಡೆಗೆ ಮುಖ ತಿರುಗಿಸದೆ ಬೆನ್ನುಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ - ಎದ್ದು ನಮ್ಮನ್ನುದ್ಧರಿಸು ಎಂದು ಮೊರೆಯಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ. ಅಧ್ಯಾಯವನ್ನು ನೋಡಿ |