ಯೆರೆಮೀಯ 2:28 - ಕನ್ನಡ ಸಮಕಾಲಿಕ ಅನುವಾದ28 ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ. ಅಧ್ಯಾಯವನ್ನು ನೋಡಿ |