Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:32 - ಕನ್ನಡ ಸಮಕಾಲಿಕ ಅನುವಾದ

32 ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:32
24 ತಿಳಿವುಗಳ ಹೋಲಿಕೆ  

ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,


ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.


ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.


ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.


ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.


ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.


ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಒಂಟೆಗಳು ನೀರು ಕುಡಿದಾದ ಮೇಲೆ, ಆ ಮನುಷ್ಯನು ಅರ್ಧ ತೊಲೆಯ ತೂಕದ ಚಿನ್ನದ ಮೂಗುತಿಯನ್ನು, ಹತ್ತು ತೊಲೆ ತೂಕದ ಎರಡು ಬಳೆಗಳನ್ನು ಆಕೆಗೆ ಕೊಟ್ಟನು.


“ಇಸ್ರಾಯೇಲಿನ ಪುತ್ರಿಯರೇ, ಸೌಲನಿಗೋಸ್ಕರ ಅಳಿರಿ. ನಿಮಗೆ ರಕ್ತಾಂಬರವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ. ನಿಮ್ಮ ಉಡುಗೆಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.


ಅವನು ಬೆಳ್ಳಿಯ ಒಡವೆ, ಬಂಗಾರದ ಒಡವೆ, ವಸ್ತ್ರಗಳನ್ನೂ ತಂದು, ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ, ಆಕೆಯ ತಾಯಿಗೂ ಅಮೂಲ್ಯವಾದ ಉಡುಗೊರೆಗಳನ್ನು ಕೊಟ್ಟನು.


ಅವನು ಮೂಗುತಿಯನ್ನೂ, ತನ್ನ ಸಹೋದರಿಯ ಕೈಗಳಲ್ಲಿದ್ದ ಬಳೆಗಳನ್ನೂ ಕಂಡು, ಆ ಮನುಷ್ಯನು ತನ್ನ ಬಳಿ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿ ರೆಬೆಕ್ಕಳ ಮಾತುಗಳನ್ನು ಕೇಳಿ, ಆ ಮನುಷ್ಯನ ಬಳಿಗೆ ಬಂದನು. ಅವನು ಇನ್ನೂ ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಪ್ರಿಯಕರರನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಏಕೆ ಚಂದ ಮಾಡಿಕೊಳ್ಳುತ್ತೀ? ಇದರಿಂದ ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟರು.


ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು