Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:33 - ಕನ್ನಡ ಸಮಕಾಲಿಕ ಅನುವಾದ

33 ಪ್ರಿಯಕರರನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಏಕೆ ಚಂದ ಮಾಡಿಕೊಳ್ಳುತ್ತೀ? ಇದರಿಂದ ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನೀವು ನಿಮ್ಮ ನಲ್ಲನಲ್ಲೆಯರನ್ನು ಹುಡುಕಿಕೊಂಡು ಹೋಗುವುದರಲ್ಲಿ ಎಷ್ಟೋ ನಿಪುಣರು ! ಬಲು ಕೆಟ್ಟ ಹೆಂಗಸು ಕೂಡ ನಿಮ್ಮಿಂದ ಕಲಿತುಕೊಳ್ಳಬಹುದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದರಿದಿದ್ದೀ! ಆದಕಾರಣ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಒಗ್ಗಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಯೆಹೂದವೇ, ಪ್ರಿಯತಮನ ಬೆನ್ನುಹತ್ತಿ ಹೋಗುವದು ನಿನಗೆ ಗೊತ್ತು. ಆದಕಾರಣ ದುರಾಭ್ಯಾಸವನ್ನು ನೀನು ಕಲಿತುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:33
12 ತಿಳಿವುಗಳ ಹೋಲಿಕೆ  

ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.


ಆದ್ದರಿಂದ ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಭೂಪ್ರದೇಶವನ್ನು ಕಡಿಮೆ ಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು, ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಪುತ್ರಿಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.


ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.


“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.


ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.


ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು