Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:34 - ಕನ್ನಡ ಸಮಕಾಲಿಕ ಅನುವಾದ

34 ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:34
22 ತಿಳಿವುಗಳ ಹೋಲಿಕೆ  

ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.


“ಒಬ್ಬ ಕಳ್ಳನು ಮನೆ ಮುರಿಯುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಹೊಡೆದುಕೊಂದರೆ, ಹೊಡೆದವನ ರಕ್ತ ಸುರಿಸಬಾರದು.


“ ‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.


ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ. ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.


ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿಕೊಂಡು, ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ, ಸುಳ್ಳಿನ ಸಂತತಿಯೂ ಅಲ್ಲವೋ?


ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ, ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ. ನಿಮ್ಮ ತುಟಿಗಳು ಸುಳ್ಳನ್ನು ಆಡುತ್ತವೆ. ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.


ಪ್ರಿಯಕರರನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಏಕೆ ಚಂದ ಮಾಡಿಕೊಳ್ಳುತ್ತೀ? ಇದರಿಂದ ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.


ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು. ಅವರು ರಕ್ತದಿಂದ ತಮ್ಮನ್ನು ತಾವೇ ಕಲುಷಿತಗೊಳಿಸಿಕೊಂಡರು. ಆದ್ದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೇ ಹೋದರು.


ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.


ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


“ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದು ಕೊಯ್ದರೆ, ಇಲ್ಲವೆ ಅದನ್ನು ಮಾರಿದರೆ, ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ, ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.


ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು