ಯೆರೆಮೀಯ 2:37 - ಕನ್ನಡ ಸಮಕಾಲಿಕ ಅನುವಾದ37 ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟು ಹೋಗುವೆ. ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅಲ್ಲಿಂದಲೂ ನಿರಾಶೆಯಿಂದ ತಲೆಯ ಮೇಲೆ ಕೈಹೊತ್ತು ಹೊರಡುವಿರಿ. ನೀವು ಯಾರಲ್ಲಿ ನಂಬಿಕೆಯಿಟ್ಟಿದ್ದಿರೋ ಅವರನ್ನು ಸರ್ವೇಶ್ವರನಾದ ನಾನು ನಿರಾಕರಿಸಿದ್ದೇನೆ. ಅವರಿಂದ ನಿಮ್ಮ ಕಾರ್ಯ ಕೈಗೂಡದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅಲ್ಲಿಂದಲೂ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವಿ; ಏಕಂದರೆ ನಿನ್ನ ಭರವಸಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಸಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.” ಅಧ್ಯಾಯವನ್ನು ನೋಡಿ |