Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:4 - ಕನ್ನಡ ಸಮಕಾಲಿಕ ಅನುವಾದ

4 ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಲಗಳೇ, ಯೆಹೋವ ದೇವರ ವಾಕ್ಯವನ್ನು ನೀವು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯಕೋಬನ ಮನೆತನವೇ, ಇಸ್ರಯೇಲ್ ವಂಶದ ಸಕಲ ಗೋತ್ರಗಳೇ, ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿರಿ; ಸರ್ವೇಶ್ವರ ಹೀಗೆನ್ನುತ್ತಾರೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೋಬನ ಮನೆತನದವರೇ, ಯೆಹೋವನ ಸಂದೇಶವನ್ನು ಕೇಳಿರಿ. ಇಸ್ರೇಲಿನ ಎಲ್ಲಾ ಕುಲದವರೇ, ಯೆಹೋವನ ಸಂದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:4
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; ನೀನು ಹೇಳುವುದನ್ನು ಗುಡ್ಡಗಳು ಕೇಳಲಿ.


ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.


“ ‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ.


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


“ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.


‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.


ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಏಕೆಂದರೆ ಯೆಹೋವ ದೇವರು ಮಾತನಾಡಿದ್ದಾರೆ.


“ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?


ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು