ಯೆರೆಮೀಯ 20:10 - ಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿ |