Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:11
25 ತಿಳಿವುಗಳ ಹೋಲಿಕೆ  

ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.


ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.


ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ನನ್ನ ಶತ್ರುಗಳೆಲ್ಲರೂ ನಾಚಿಕೆಪಟ್ಟು ತತ್ತರಿಸುವರು; ಕ್ಷಣಮಾತ್ರದಲ್ಲಿ ಅವರು ಅವಮಾನಗೊಂಡು ಹಿಂದಿರುಗಿ ಹೋಗುವರು.


ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.


ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ. ಮಾನವರ ಪರವಾಗಿ ಮಾಡಿರುವ ದೇವರ ಕಾರ್ಯಗಳು ಅತಿಶಯವಾಗಿವೆ.


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.


ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.


ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!


“ನನ್ನ ಯೌವನದಿಂದ ವೈರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರು; ಆದರೆ ಅವರು ನನ್ನ ಮೇಲೆ ವಿಜಯ ಸಾಧಿಸಲಿಲ್ಲ.


ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ, ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿ ತೀರಿಸು, ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ ಏಕೆಂದರೆ ನೀವು ಕನಿಕರ ಉಳ್ಳವರು, ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ನಿನ್ನ ಕುರುಬರನ್ನೆಲ್ಲಾ ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಜೊತೆಗಾರರು ಸೆರೆಗೆ ಹೋಗುವರು. ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ, ಅವಮಾನವೂ ಆಗುವುದು.


ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು.


ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು