Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:17 - ಕನ್ನಡ ಸಮಕಾಲಿಕ ಅನುವಾದ

17 ನಾನು ಗರ್ಭ ಬಿಟ್ಟಾಗಲೇ ಅವರು ನನ್ನನ್ನು ಕೊಲ್ಲದೆ ಹೋದದ್ದರಿಂದ, ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು, ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೆಯದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತಾಯಗರ್ಭದಲ್ಲಿರುವಾಗಲೆ ಅವನೇಕೆ ನನ್ನನ್ನು ಕೊಂದುಹಾಕಲಿಲ್ಲ? ಆಗ ನನ್ನ ತಾಯೇ ನನಗೆ ಗೋರಿಯಾಗುತ್ತಿದ್ದಳಲ್ಲಾ ! ಆಕೆಯ ಗರ್ಭ ಸದಾ ಬಸಿರಾಗಿಯೇ ಇರುತ್ತಿತ್ತಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಕೆ ಆ ಮನುಷ್ಯನು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಕೊಲ್ಲಲಿಲ್ಲ? ಆಗ ಅವನು ನನ್ನನ್ನು ಕೊಂದಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು. ನಾನೆಂದೂ ಹುಟ್ಟುತ್ತಲೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:17
5 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ.


ಗರ್ಭಸ್ರಾವವಾಗಿ ಹೂಣಿಟ್ಟ ಪಿಂಡದಂತೆಯೂ ಬೆಳಕನ್ನು ನೋಡದ ಕೂಸುಗಳಂತೆಯೂ ನಾನೇಕೆ ಆಗಲಿಲ್ಲ?


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು