ಯೆರೆಮೀಯ 20:4 - ಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಏಕೆಂದರೆ ಸರ್ವೇಶ್ವರನೆ ಹೇಳಿರುವ ಮಾತಿವು - ‘ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲ ಸ್ನೇಹಿತರಿಗೂ ಭಯಾನಕನನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ಅದನ್ನು ನೀನು ಕಣ್ಣಾರೆ ಕಾಣುವೆ. ನಾನು ಜುದೇಯರನೆಲ್ಲ ಬಾಬಿಲೋನಿನ ಅರಸನ ಕೈಗೊಪ್ಪಿಸುವೆನು. ಅವನು ಇವರನ್ನು ಬಾಬಿಲೋನಿಗೆ ಸೆರೆಯಾಗಿ ಕೊಂಡೊಯ್ದು ಕತ್ತಿಗೆ ತುತ್ತಾಗಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಏಕಂದರೆ ಯೆಹೋವನು - ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗೆ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ಅದನ್ನು ಕಣ್ಣಾರೆ ಕಾಣುವಿ; ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು. ಅಧ್ಯಾಯವನ್ನು ನೋಡಿ |