ಯೆರೆಮೀಯ 20:5 - ಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಷ್ಟು ಮಾತ್ರವಲ್ಲ, ಈ ನಗರದ ಎಲ್ಲ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಹಾಗು ಜುದೇಯದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಇವರ ಶತ್ರುಗಳ ಕೈವಶಮಾಡುವೆನು. ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮತ್ತು ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲಿಗೆ ತೆಗೆದುಕೊಂಡು ಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಅಧ್ಯಾಯವನ್ನು ನೋಡಿ |