ಯೆರೆಮೀಯ 20:7 - ಕನ್ನಡ ಸಮಕಾಲಿಕ ಅನುವಾದ7 ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ. ನಾನು ಮರುಳಾದೆನು; ನೀನು ನನಗಿಂತ ಬಲಿಷ್ಟನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದೆ, ನಿಜವಾಗಿಯೂ ನಾನು ಮರುಳಾದೆನು, ನೀನು ನನಗಿಂತ ಬಲಿಷ್ಠನಾದುದರಿಂದ ಗೆದ್ದೆ. ನಾನೊಂದು ತಮಾಷೆಯಾಗಿದ್ದೇನೆ. ಹಗಲೆಲ್ಲ ಜನರು ನನ್ನನ್ನು ಕಂಡು ನಗುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |