Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:13 - ಕನ್ನಡ ಸಮಕಾಲಿಕ ಅನುವಾದ

13 ಇಗೋ, ತಗ್ಗಿನ ನಗರಿಯೇ, ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, “ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಹಾ, ತಗ್ಗಿನ ನಗರಿಯೇ, ಪ್ರಸ್ಥಭೂವಿುಯ ಶಿಖರದ ಮೇಲಣ ಪುರಿಯೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಯಾರು ಇಳಿದು ನಮ್ಮ ಮೇಲೆ ಬಂದಾರು, ನಮ್ಮ ನಿವಾಸಗಳಲ್ಲಿ ಯಾರು ನುಗ್ಗಿಯಾರು ಎನ್ನುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:13
21 ತಿಳಿವುಗಳ ಹೋಲಿಕೆ  

“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಭೂರಾಜರೂ, ವಿರೋಧಿಯೂ, ಶತ್ರುವೂ ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


“ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು.


ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ ತಮ್ಮ ಜನರ ಸುತ್ತಲೂ ಇದ್ದಾರೆ.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.


ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?


“ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.


“ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.


ಆ ದಿನದಲ್ಲಿ ನಿಮ್ಮ ಮಕ್ಕಳಿಗೆ, ‘ನಾವು ಈಜಿಪ್ಟಿನಿಂದ ಹೊರಗೆ ಬಂದಾಗ ಯೆಹೋವ ದೇವರು ನಮಗೆ ಮಾಡಿದ್ದನ್ನು ಸ್ಮರಿಸುವುದಕ್ಕಾಗಿ ಇದನ್ನು ಆಚರಿಸುತ್ತೇವೆ,’ ಎಂದು ತಿಳಿಸಬೇಕು.


ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ, ಏತಾಮಿನ ಮರುಭೂಮಿಯ ಅಂಚಿನಲ್ಲಿ ಇಳಿದುಕೊಂಡರು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.


‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”


ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು