ಯೆರೆಮೀಯ 21:14 - ಕನ್ನಡ ಸಮಕಾಲಿಕ ಅನುವಾದ14 ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರಿಯೆಂಬ ವನಕ್ಕೆ ಬೆಂಕಿಹಚ್ಚುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.” ಅಧ್ಯಾಯವನ್ನು ನೋಡಿ |
“ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ.