Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:2 - ಕನ್ನಡ ಸಮಕಾಲಿಕ ಅನುವಾದ

2 “ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನಲ್ಲಾ; ಒಂದುವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:2
44 ತಿಳಿವುಗಳ ಹೋಲಿಕೆ  

ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು.


ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


“ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.


ಆದರೆ ಯೆಹೋವ ದೇವರ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ, ‘ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀವು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಹೋಗುತ್ತಿರುವುದೇಕೆ?


ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು.


ಏಕೆಂದರೆ ಆ ದಿವಸಗಳಲ್ಲಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ,


ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.


ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.


ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


ಏಕೆಂದರೆ ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.


ಇದಕ್ಕೆ ಯೆಹೋವ ದೇವರು, ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.


ಆಗ ಯೆರೆಮೀಯನು ಅವರಿಗೆ ಹೇಳಿದ್ದೇನೆಂದರೆ, “ಚಿದ್ಕೀಯನಿಗೆ ಹೀಗೆ ಹೇಳಿರಿ:


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.


ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು