ಯೆರೆಮೀಯ 21:4 - ಕನ್ನಡ ಸಮಕಾಲಿಕ ಅನುವಾದ4 ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಈ ಪಟ್ಟಣದೊಳಗೆ ಕೂಡಿಹಾಕುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ. ಅಧ್ಯಾಯವನ್ನು ನೋಡಿ |