ಯೆರೆಮೀಯ 21:5 - ಕನ್ನಡ ಸಮಕಾಲಿಕ ಅನುವಾದ5 ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನೇ ಕೋಪರೋಷ ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಭುಜಪರಾಕ್ರಮದಿಂದಲೂ ನಿಮಗೆ ವಿರುದ್ಧವಾಗಿ ಯುದ್ಧಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೂದಿಗಳಾದ ನಿಮ್ಮ ವಿರುದ್ಧ ನಾನೇ ಕಾದಾಡುತ್ತೇನೆ. ನಾನು ನನ್ನ ಬಲಿಷ್ಠವಾದ ಕೈಗಳಿಂದ ನಿಮ್ಮ ವಿರುದ್ಧ ಹೋರಾಡುತ್ತೇನೆ. ನಿಮ್ಮ ಮೇಲೆ ನನಗೆ ಬಹಳ ಕೋಪ ಬಂದಿದೆ; ಅದಕ್ಕಾಗಿ ನನ್ನ ಬಲಿಷ್ಠವಾದ ತೋಳಿನಿಂದ ನಾನು ನಿಮ್ಮ ಸಂಗಡ ಯುದ್ಧ ಮಾಡುತ್ತೇನೆ. ನಾನು ನಿಮ್ಮ ವಿರುದ್ಧ ಬಹಳ ರಭಸದಿಂದ ಯುದ್ಧಮಾಡಿ ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ತೋರಿಸುತ್ತೇನೆ. ಅಧ್ಯಾಯವನ್ನು ನೋಡಿ |