Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:14 - ಕನ್ನಡ ಸಮಕಾಲಿಕ ಅನುವಾದ

14 ಅವನು, ‘ನಾನು ವಿಸ್ತಾರವಾದ ಅರಮನೆಯನ್ನೂ, ವಿಶಾಲವಾದ ಕೊಠಡಿಗಳನ್ನೂ ಕಟ್ಟಿಸಿಕೊಳ್ಳುವೆನೆಂದು ಹೇಳಿ.’ ಕಿಟಕಿಗಳನ್ನು ಕೊರೆದು, ದೇವದಾರಿನ ಹಲಗೆಗಳನ್ನು ಹಾಕಿ, ಕೆಂಪು ಬಣ್ಣವನ್ನು ಹಚ್ಚುವವನಿಗೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ‘ಸವಿಸ್ತಾರವಾದ ಅರಮನೆ ನಿರ್ಮಿಸಿಕೊಳ್ಳುವೆನು ವಿಶಾಲವಾದ ಮಹಡಿ ಕಟ್ಟಿಸಿಕೊಳ್ಳುವೆನು’ ಎನ್ನುವನಿಗೆ ಧಿಕ್ಕಾರ ! ಅವನು ಅಗಲಗಲವಾದ ಕಿಟಕಿಗಳನ್ನಿಡಿಸಿಕೊಳ್ಳುತ್ತಾನೆ ಅವುಗಳಿಗೆ ಕೆಂಪು ಬಣ್ಣವನ್ನೂ ಬಳಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಹಾ, ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು ಎಂದು ಹೇಳಿ ಅಗಲಗಲವಾದ ಕಿಟಕಿಗಳನ್ನಿಡಿಸಿ [ಒಳಗೆ ಗೋಡೆಗೆಲ್ಲಾ] ದೇವದಾರಿನ ಹಲಿಗೆಗಳನ್ನು ಹೊದಿಸಿ ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಯೆಹೋಯಾಕೀಮನು, ‘ನಾನೇ ಒಂದು ದೊಡ್ಡ ಅರಮನೆಯನ್ನು ಕಟ್ಟಿಸುತ್ತೇನೆ. ನಾನು ಮಹಡಿಯ ಮೇಲೆ ದೊಡ್ಡದೊಡ್ಡ ಕೋಣೆಗಳನ್ನು ಕಟ್ಟಿಸುತ್ತೇನೆ’ ಎಂದು ಹೇಳುತ್ತಾನೆ. ಅವನು ದೊಡ್ಡದೊಡ್ಡ ಕಿಟಕಿಗಳುಳ್ಳ ಮನೆಯನ್ನು ಕಟ್ಟಿಸುತ್ತಾನೆ. ದೇವದಾರಿನ ಹಲಗೆಗಳನ್ನು ಹೊದಿಸುತ್ತಾನೆ. ಅದಕ್ಕೆ ಕೆಂಪು ಬಣ್ಣವನ್ನು ಬಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:14
13 ತಿಳಿವುಗಳ ಹೋಲಿಕೆ  

ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.


“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”


ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ಗರ್ವದಿಂದಲೂ, ಹೆಮ್ಮೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯೀಮ್ಯರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಈ ಮಾತು ಗೊತ್ತಾಗುವುದು. ಅದೇನೆಂದರೆ,


ನಮ್ಮ ಮನೆಯ ತೊಲೆಗಳು ದೇವದಾರು ಮರಗಳು. ನಮ್ಮ ಮೇಲ್ಛಾವಣಿ ತುರಾಯಿ ಮರಗಳು.


ನಿನ್ನ ಹೊರಗಿನ ಕೆಲಸವನ್ನು ಕ್ರಮವಾಗಿ ಇರಿಸು. ನಿನ್ನ ಹೊಲಗಳನ್ನು ಸಿದ್ಧಪಡಿಸು; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.


ಕಲಹವನ್ನು ಪ್ರೀತಿಮಾಡುವವನು ಪಾಪವನ್ನು ಪ್ರೀತಿಮಾಡುತ್ತಾನೆ; ತನ್ನ ಗೋಡೆಯನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಆಮಂತ್ರಿಸುತ್ತಾನೆ.


ಅವನು ದೊಡ್ಡ ತುರಾಯಿ ಮರಗಳಿಂದ ಮುಚ್ಚಿದ ಕೋಣೆಯನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಮೇಲೆ ಖರ್ಜೂರದ ಗಿಡಗಳನ್ನೂ, ಸರಪಣಿಗಳನ್ನೂ ಕೆತ್ತಿಸಿದನು.


“ಅವಳು ತನ್ನ ವ್ಯಭಿಚಾರತ್ವವನ್ನು ಇನ್ನೂ ಹೆಚ್ಚಿಸಿದಳು. ಗೋಡೆಯ ಮೇಲೆ ಕೆಂಪು ಬಣ್ಣದಿಂದ ಚಿತ್ರಿಸಲಾದ ಕಸ್ದೀಯರ ಪುರುಷರನ್ನು ನೋಡಿದಳು. ಅವರು,


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು