Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:16 - ಕನ್ನಡ ಸಮಕಾಲಿಕ ಅನುವಾದ

16 ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಅವನಿಗೆ ನೆಮ್ಮದಿಯಾಗಿತ್ತು. ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವದೆಂದರೆ ಇದೇ ಎಂಬದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:16
25 ತಿಳಿವುಗಳ ಹೋಲಿಕೆ  

ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”


ದೇವರು ಬಡವನ ಬಲಗಡೆಯಲ್ಲಿ ನಿಂತು, ಅವನ ಪ್ರಾಣವನ್ನು ಖಂಡಿಸುವವರಿಂದ ಅವನನ್ನು ರಕ್ಷಿಸುವರು.


ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.


ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


“ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ.


ಅವರು ತಂದೆಯನ್ನಾಗಲಿ ನನ್ನನ್ನಾಗಲಿ ತಿಳಿಯದ ಕಾರಣ ಇವೆಲ್ಲವುಗಳನ್ನು ಮಾಡುವರು.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಅವರು, “ನಿನ್ನ ತಂದೆ ಎಲ್ಲಿ?” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ತಿಳಿದಿಲ್ಲ, ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ,” ಎಂದು ಉತ್ತರಕೊಟ್ಟರು.


“ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ. ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ. ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ.


ನಿಮ್ಮನ್ನು ತಿಳಿದವರಿಗೆ ನಿಮ್ಮ ಪ್ರೀತಿಯು ಮುಂದುವರೆಯಲಿ ಯಥಾರ್ಥ ಹೃದಯದವರಿಗೆ ನಿಮ್ಮ ನೀತಿಯೂ ನೆಲೆಯಾಗಲಿ.


ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು