Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:18 - ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವರು ಅವನನ್ನು ಕುರಿತು ಗೋಳಾಡಿ, ‘ಅಯ್ಯೋ, ನನ್ನ ಸಹೋದರನೇ, ಅಯ್ಯೋ, ನನ್ನ ಸಹೋದರಿಯೇ,’ ಎಂದು ಅನ್ನುವುದಿಲ್ಲ. ‘ಅಯ್ಯೋ, ದೊರೆಯೇ, ಅಯ್ಯೋ, ಅವನ ವೈಭವವೇ,’ ಎಂದು ಅವನನ್ನು ಕುರಿತು ಗೋಳಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು ಹೀಗನ್ನುತ್ತಾನೆ - ಅಯ್ಯೋ, ಅಣ್ಣಾ, ಅಯ್ಯೋ, ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವದಿಲ್ಲ; ಅಯ್ಯೋ, ನಮ್ಮೊಡೆಯಾ, ಅಕಟಾ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:18
17 ತಿಳಿವುಗಳ ಹೋಲಿಕೆ  

ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.


ಅವನ ಹೆಣವನ್ನು ತನ್ನ ಸಮಾಧಿಯಲ್ಲಿ ಹೂಳಿಟ್ಟನು. ಆಗ ಅವರು, “ಅಯ್ಯೋ, ನಮ್ಮ ಸಹೋದರನೇ!” ಎಂದು ಅವನಿಗೋಸ್ಕರ ಗೋಳಾಡಿದರು.


ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.


“ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”


ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’ ”


ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.


ನನ್ನ ಸಹೋದರನಾದ ಯೋನಾತಾನನೇ, ನಾನು ನಿನಗೋಸ್ಕರ ಶೋಕಿಸುತ್ತೇನೆ. ನೀನು ನನಗೆ ಬಹಳ ಮನೋಹರನಾಗಿದ್ದಿ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯಕರವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.


ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ರೂಮಾ ಊರಿನವಳೂ ಪೆದಾಯನ ಮಗಳೂ ಆದ ಜೆಬೂದಾ.


ಯೆಹೋಯಾಕೀಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದಲ್ಲಿಯೇ ಸಾಯುವನು. ಅವನು ಈ ದೇಶವನ್ನು ಇನ್ನು ನೋಡುವುದಿಲ್ಲ.”


ಯೋಷೀಯನ ಮಕ್ಕಳು: ಚೊಚ್ಚಲಮಗನಾದ ಯೋಹಾನಾನ್, ಎರಡನೆಯವನಾದ ಯೆಹೋಯಾಕೀಮ್, ಮೂರನೆಯವನಾದ ಚಿದ್ಕೀಯ, ನಾಲ್ಕನೆಯವನಾದ ಶಲ್ಲೂಮ್.


“ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ,


ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು