ಯೆರೆಮೀಯ 22:20 - ಕನ್ನಡ ಸಮಕಾಲಿಕ ಅನುವಾದ20 “ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಲೆಬನೋನ್ ಬೆಟ್ಟವನ್ನು ಹತ್ತಿ ಬೊಬ್ಬೆಯಿಡು ! ಬಾಷಾನಿನಲ್ಲಿ ಮೊರೆಯಿಡು ! ಅಬಾರೀಮಿನಲ್ಲಿ ಕಿರುಚಾಡು ! ಏಕೆಂದರೆ ನಿನ್ನ ಮಿಂಡರೆಲ್ಲ ಹಾಳಾಗಿಹೋದರು ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 [ಚೀಯೋನ್ ಯುವತಿಯೇ,] ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀವಿುನಲ್ಲಿ ಅರಚಿಕೋ! ನಿನ್ನ ವಿುಂಡರೆಲ್ಲಾ ಹಾಳಾಗಿ ಹೋದರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಯೆಹೂದವೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೊ, ನಿನ್ನ ಧ್ವನಿಯು ಬಾಷಾನ್ ಪರ್ವತಗಳಲ್ಲಿ ಕೇಳಿಸಲಿ. ಅಬಾರೀಮಿನಲ್ಲಿ ಅರಚಿಕೊ; ಏಕೆಂದರೆ ನಿನ್ನ ‘ಪ್ರಿಯತಮರೆಲ್ಲರನ್ನೂ’ ನಾಶಮಾಡಲಾಗುವುದು. ಅಧ್ಯಾಯವನ್ನು ನೋಡಿ |
ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.