Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:23 - ಕನ್ನಡ ಸಮಕಾಲಿಕ ಅನುವಾದ

23 ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ದುಃಖಕರವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:23
18 ತಿಳಿವುಗಳ ಹೋಲಿಕೆ  

ಅದರ ಕೀರ್ತಿಯನ್ನು ಕೇಳಿದ್ದೇವೆ; ನಮ್ಮ ಕೈಗಳು ಜೋಲಾಡುತ್ತವೆ, ಸಂಕಟವೂ, ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.


ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.


ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ, ತನ್ನ ಗೂಡನ್ನು ಉನ್ನತದಲ್ಲಿಡುವವನಿಗೂ, ನಾಶದ ಹಿಡಿತದಿಂದ ತಪ್ಪಿಸಿಕೊಳ್ಳಬಯಸುವವನಿಗೂ ಕಷ್ಟ!


ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.


ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.


ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಮೋವಾಬಿನಲ್ಲಿ ವಾಸವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರಿ; ಸಂದುಗಳ ಬಾಯಿಗಳ ಪಕ್ಕಗಳಲ್ಲಿ ಗೂಡು ಕಟ್ಟುವ ಪಾರಿವಾಳದ ಹಾಗಿರಿ.


ಇಗೋ, ತಗ್ಗಿನ ನಗರಿಯೇ, ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, “ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.


ಬಳಿಕ ಕೇನ್ಯರನ್ನು ಅವನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.


ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು