Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗನ್ನುತ್ತಾನೆ - ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ ಲೆಬನೋನಿನ ಶಿಖರದ ಹಾಗೂ ಇದ್ದೀ, ಆದರೂ ನಾನು ನಿನ್ನನ್ನು ಮರುಭೂವಿುಯನ್ನಾಗಿಯೂ ನಿರ್ಜನ ಪಟ್ಟಣವನ್ನಾಗಿಯೂ ಮಾಡುವದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:6
26 ತಿಳಿವುಗಳ ಹೋಲಿಕೆ  

ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಕೋಟೆಯ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗುವುದು. ಅಲ್ಲಿ ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅವು ಅಲ್ಲಿನ ಚಿಗುರುಗಳನ್ನು ತಿಂದುಬಿಡುವುವು.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.


ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.


“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,


ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ”


“ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ,


ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. ದೇಶವೆಲ್ಲಾ ಹಾಳಾಯಿತು. ಫಕ್ಕನೆ ನನ್ನ ಗುಡಾರಗಳೂ, ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.


ಅವನ ಕಾಲುಗಳು ಶುದ್ಧ ಬಂಗಾರದ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ತೋರಿಕೆಯು ಲೆಬನೋನಿನ ದೇವದಾರುಗಳ ಹಾಗೆ ಶ್ರೇಷ್ಠವಾಗಿವೆ.


ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು.


ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


ಇಗೋ, ನನ್ನ ಪ್ರಿಯಳೇ, ನೀನು ಎಷ್ಟು ಸುಂದರಿ! ಆಹಾ, ನೀನು ಎಷ್ಟು ಸುಂದರಿಯು. ನಿನ್ನ ಮುಸುಕಿನೊಳಗಿನ ನಿನ್ನ ಕಣ್ಣುಗಳು ಪಾರಿವಾಳಗಳೇ. ನಿನ್ನ ತಲೆಕೂದಲು ಗಿಲ್ಯಾದಿನ ಪರ್ವತದಿಂದ ಇಳಿದು ಬರುವ ಮೇಕೆ ಮಂದೆಯ ಹಾಗೆ ಇದೆ.


ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, ಒಣ ಭೂಮಿಯೂ, ಮರುಭೂಮಿಯೂ ಆಗುವುದು.


ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.


ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.


ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.


ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು