ಯೆರೆಮೀಯ 22:9 - ಕನ್ನಡ ಸಮಕಾಲಿಕ ಅನುವಾದ9 ‘ಆಗ ಅವರು ತಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮಸ್ಕರಿಸಿ ಸೇವಿಸಿದ್ದರಿಂದಲೇ,’ ಎಂದು ಅವರು ಉತ್ತರಕೊಡುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ಈ ನಗರದವರು ತಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಆರಾಧಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಹೇಳಿಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಪ್ರಶ್ನೆಗೆ ಈ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.’” ಅಧ್ಯಾಯವನ್ನು ನೋಡಿ |