Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:1 - ಕನ್ನಡ ಸಮಕಾಲಿಕ ಅನುವಾದ

1 “ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ !” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಕಾವಲಿನ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ ಎಂಬದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ಸಂದೇಶವಿದು: “ಯೆಹೂದದ ಕುರುಬರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಬರು ಕುರಿಗಳನ್ನು ಹಾಳುಮಾಡುತ್ತಿದ್ದಾರೆ. ಅವರು ನನ್ನ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಹೋಗುವಂತೆ ಮಾಡುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:1
30 ತಿಳಿವುಗಳ ಹೋಲಿಕೆ  

ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ ನಿಮಗೆ ಕಷ್ಟ!


ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.


ನಿನ್ನ ಕುರುಬರನ್ನೆಲ್ಲಾ ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಜೊತೆಗಾರರು ಸೆರೆಗೆ ಹೋಗುವರು. ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ, ಅವಮಾನವೂ ಆಗುವುದು.


ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.


“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.


ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.


ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.


ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.


ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ನೀವು ನನ್ನ ಕುರಿಗಳು, ನನ್ನ ಹುಲ್ಲುಗಾವಲಿನ ಕುರಿಗಳು, ಮತ್ತು ನಾನು ನಿಮ್ಮ ದೇವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಏಕೆಂದರೆ ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿಬಿಟ್ಟಿರಿ.


“ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.


ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ ದರೋಡೆಕೋರರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.


ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಮೀಸಲಾದ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು. ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವುವು. ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


“ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ. ನಾಯಕರನ್ನು ದಂಡಿಸುವೆನು. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವ ಯೆಹೂದನ ಮನೆತನದವರನ್ನು ಪರಿಪಾಲಿಸಿ, ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು