Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:14 - ಕನ್ನಡ ಸಮಕಾಲಿಕ ಅನುವಾದ

14 ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:14
45 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.


ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ.


ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.


ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಸೊದೋಮ್ ಪಟ್ಟಣದ ಗತಿಯು ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಅವಳ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರೂ ವಿಶ್ವಾಸದ್ರೋಹಿಗಳೂ ಆಗಿದ್ದಾರೆ. ಅವಳ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರಮಾಡುತ್ತಾರೆ, ದೈವನಿಯಮವನ್ನು ಭಂಗಪಡಿಸುತ್ತಾರೆ.


ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಅವನು ಬೆಳಿಗ್ಗೆ ಕೂಗನ್ನೂ, ಮಧ್ಯಾಹ್ನದಲ್ಲಿ ಆರ್ಭಟವನ್ನೂ ಕೇಳಲಿ.


ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.


ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು


ಒಂದು ಪ್ರವಾದನೆ: ಇಸ್ರಾಯೇಲಿಗೆ ಮಲಾಕಿಯನ ಮುಖಾಂತರ ಬಂದ ಯೆಹೋವ ದೇವರ ವಾಕ್ಯ:


ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ’


ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ಇತರ ಜನಾಂಗಗಳಲ್ಲಿ ವಿಚಾರಿಸಿರಿ. ಇಂಥವುಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.


ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”


“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯೀಮಿನ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಅಪವಿತ್ರವಾಗಿದೆ.


“ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು.


ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು.


ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ.


ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು