ಯೆರೆಮೀಯ 23:17 - ಕನ್ನಡ ಸಮಕಾಲಿಕ ಅನುವಾದ17 ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನನ್ನು ಅಸಡ್ಡೆಮಾಡುವವರಿಗೆ - ನಿಮಗೆ ಶುಭವಾಗುವದು ಎಂಬದಾಗಿ ಯೆಹೋವನು ಅಂದಿದ್ದಾನೆ ಎಂದು ಹೇಳುತ್ತಲೇ ಇದ್ದಾರೆ; ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ - ನಿಮಗೆ ಯಾವ ಕೇಡೂ ಸಂಭವಿಸದು ಎಂದು ನುಡಿಯುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”