Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:19 - ಕನ್ನಡ ಸಮಕಾಲಿಕ ಅನುವಾದ

19 ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:19
19 ತಿಳಿವುಗಳ ಹೋಲಿಕೆ  

ಇಗೋ, ಯೆಹೋವ ದೇವರ ಬಿರುಗಾಳಿ ರೌದ್ರವಾಗಿ ಹೊರಡುತ್ತದೆ. ಅದು ಬಡಿದುಕೊಂಡು ಹೋಗುವ ಬಿರುಗಾಳಿಯೇ. ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವುದು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವುದು. ಭೂಮಿಯ ಮೇರೆಗಳಿಂದ ಮಹಾ ಬಿರುಗಾಳಿ ಏಳುವುದು.”


ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ.


ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.


ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು.


ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.


ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸವನ್ನು ಇವರ ಮೇಲೆ ಊದಿದಾಗಲೇ ಒಣಗಿ ಹೋಗುವರು. ಬಿರುಗಾಳಿಯು ಇವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವುದು.


ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ, ವಿಪತ್ತು ಸುಂಟರಗಾಳಿಯಂತೆ ನಿಮ್ಮ ಮೇಲೆ ಬೀಸಿದಾಗ, ಯಾತನೆ ಮತ್ತು ತೊಂದರೆ ನಿಮ್ಮನ್ನು ಆವರಿಸಿದಾಗಲೂ ಪರಿಹಾಸ್ಯಕ್ಕೆ ಒಳಗಾಗುವಿರಿ.


ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಬಾಬಿಲೋನಿಗೆ ವಿರೋಧವಾಗಿಯೂ, ನನಗೆದುರಾಗಿ ಎದ್ದಿರುವ ಲೇಬ್ ಕಾಮೈ ಪ್ರಜೆಗಳ ವಿರೋಧವಾಗಿಯೂ ನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.


ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು.


ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”


ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು