Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:2 - ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ : “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ - ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ; ಆಹಾ, ನಿಮ್ಮ ದುಷ್ಕೃತ್ಯಗಳ ನಿವಿುತ್ತ ನಾನು ನಿಮ್ಮನ್ನು ವಿಚಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:2
21 ತಿಳಿವುಗಳ ಹೋಲಿಕೆ  

ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.


ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಳ್ಳಲಿಲ್ಲ. ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ. ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂದರ್ಶಿಸಲಿಲ್ಲ,’ ಎಂದು ಹೇಳುವೆನು.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ?


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.


ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?


ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.


ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.


ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು, ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


ಅವು ಚದರಿಹೋದವು. ಏಕೆಂದರೆ ಅಲ್ಲಿ ಕುರುಬರಿಲ್ಲ; ಅವರು ಚದರಿಹೋದಾಗ ಎಲ್ಲಾ ಕಾಡುಮೃಗಗಳಿಗೆ ಆಹಾರವಾದವು.


ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


“ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ. ನಾಯಕರನ್ನು ದಂಡಿಸುವೆನು. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವ ಯೆಹೂದನ ಮನೆತನದವರನ್ನು ಪರಿಪಾಲಿಸಿ, ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು